Subsidy
2019 & 2020ನೇ ಸಾಲಿನಲ್ಲಿ ಇಡೀ ಪ್ರಪಂಚಕ್ಕೆ ಮಾರಕವಾಗಿ ವ್ಯಾಪಿಸಿದ್ದ ಕೊರೊನಾ ಸೋಂಕಿಗೆ (Corona) ತುತ್ತಾಗಿ ತಮ್ಮ ಇಬ್ಬರು ಪೋಷಕರನ್ನು ಮತ್ತು ಆಸರೆಯಾಗಿದ್ದ ಒಬ್ಬರೇ ಪೋಷಕರನ್ನು ಕಳೆದುಕೊಂಡ ಮಕ್ಕಳಿಗಾಗಿ ಸರ್ಕಾರವು ಮುಖ್ಯಮಂತ್ರಿ ಬಾಲಸೇವಾ ಯೋಜನೆಯನ್ನು (PM CARES for Children) ಸರ್ಕಾರ ಘೋಷಣೆ ಮಾಡಿದೆ.
ಈ ಯೋಜನೆಯು ನೆರವಿನಿಂದ ಕೋವಿಡ್ ಸಮಯದಲ್ಲಿ ಹೆತ್ತವರನ್ನು ಕಳೆದುಕೊಂಡ ಮಕ್ಕಳ ಹಿತರಕ್ಷಣೆಗಾಗಿ ಸರ್ಕಾರವು ಮಾಸಿಕ ರೂ. 3500 ಸಹಾಯಧನ ನೀಡುತ್ತಿದೆ. ಈ ಹಣವು ಮಕ್ಕಳಿಗೆ ಪೌಷ್ಟಿಕಾಂಶದ ಕೊರತೆ ನೀಗಿಸಲು ಹಾಗೂ ಶಿಕ್ಷಣದ ಖರ್ಚು ವೆಚ್ಚಗಳಿಗೆ ಮತ್ತು ದೈನಂದಿನ ಜೀವನ ನಿರ್ವಹಣೆಗೆ ಅನುಕೂಲವಾಗುತ್ತದೆ ಎನ್ನುವುದು ಸರ್ಕಾರದ ಉದ್ದೇಶ.
ಇದರೊಂದಿಗೆ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಆ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವ ಸಲುವಾಗಿ ಮಾದರಿ ವಸತಿ ಶಾಲೆಯಲ್ಲಿ ಶಿಕ್ಷಣ, 10ನೇ ತರಗತಿ ನಂತರದ ಮಕ್ಕಳಿಗೆ ಉನ್ನತ ಶಿಕ್ಷಣದ ಪ್ರೋತ್ಸಾಹಕ್ಕಾಗಿ ಲ್ಯಾಪ್ ಟಾಪ್, ಟ್ಯಾಬ್ ನೀಡಲು ನಿರ್ಧರಿಸಲಾಗಿದೆ. ಇದರ ಡೀಟೇಲ್ಸ್ ಹೀಗಿದೆ ನೋಡಿ.
* ವಿಸ್ಕೃತ ಕುಟುಂಬದ ಸದಸ್ಯರ ಆರೈಕೆಯಲ್ಲಿರುವ ಇಂತಹ ಮಕ್ಕಳಿಗೆ ಪ್ರತಿ ತಿಂಗಳು ರೂ.3,500 ಆರ್ಥಿಕ ಧನಸಹಾಯವನ್ನು ಮಗು ಮತ್ತು ಮಗುವಿನ ಕಾನೂನು ಬದ್ಧ ಪೋಷಕರ ಜಂಟಿ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು.
* 10 ವರ್ಷದೊಳಗಿನ ಮಕ್ಕಳ ಪಾಲನೆಗೆ ವಿಸ್ತ್ರತ ಕುಟುಂಬದ ಸದಸ್ಯರು ಇಲ್ಲದಿದ್ದಲ್ಲಿ ಅಂತಹ ಮಕ್ಕಳನ್ನು ರಕ್ಷಣೆ ಮತ್ತು ಪಾಲನೆಗಾಗಿ ನೋಂದಾಯಿತ ಮಕ್ಕಳ ಪಾಲನಾ ಸಂಸ್ಥೆಗೆ ದಾಖಲಿಸುವುದು.
* ರಾಜ್ಯ ಸರ್ಕಾರದ ಸ್ವಾಮ್ಯದ ಮಾದರಿ ವಸತಿ ಶಾಲೆಗಳಲ್ಲಿ ಯಾವ ತರಗತಿಗೆ ಪ್ರವೇಶಕ್ಕೆ ಅವಕಾಶವಿದೆಯೋ ಆ ತರಗತಿಯಿಂದ ಅನ್ವಯವಾಗುವಂತೆ ಪ್ರವೇಶ ಪರೀಕ್ಷೆಗಳಿಲ್ಲದೇ ನೇರವಾಗಿ ಪ್ರವೇಶಾವಕಾಶ ಕಲ್ಪಿಸಿ ಉತ್ತಮ ಗುಣಮಟ್ಟದ ಉಚಿತ ಶಿಕ್ಷಣ ನೀಡುವುದು.
* SSLC ಪೂರೈಸಿದ ಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಗಾಗಿ ಲ್ಯಾಪ್ಟಾಪ್ ಅಥವಾ ಟ್ಯಾಬ್ ವಿತರಣೆ.
* ಈ ಯೋಜನೆಯಡಿ ಪೋಷಕರನ್ನು ಕಳೆದುಕೊಂಡ ಹೆಣ್ಣು ಮಕ್ಕಳಿಗೆ 21 ವರ್ಷ ತುಂಬಿದ ನಂತರ ವಿವಾಹ, ಉನ್ನತ ಶಿಕ್ಷಣ ಹಾಗೂ ಸ್ವಯಂ ಉದ್ಯೋಗದ ಉದ್ದೇಶಗಳಿಗಾಗಿ ತಲಾ ರೂ. 1.00 ಲಕ್ಷ ಆರ್ಥಿಕ ಧನ ಒದಗಿಸಲಾಗುತ್ತಿದೆ.
* ಕೋವಿಡ್ ಕಾರಣದಿಂದ ಮಾತ್ರವಲ್ಲದೇ ಇತರೆ ಕಾರಣಗಳಿಂದ ಕೂಡ ತಂದೆ ತಾಯಿ ಇಬ್ಬರನ್ನು ಅಥವಾ ಆಸರೆಯಾಗಿದ್ದ ಒಬ್ಬರೇ ಪೋಷಕರನ್ನು ಕಳೆದುಕೊಂಡ ಮಕ್ಕಳು ಅಥವಾ ಮರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಪೋಷಕರನ್ನು ಹೊಂದಿರುವ ಮಕ್ಕಳಿಗೆ ಕೇಂದ್ರ ಸರ್ಕಾರದ ಮಿಷನ್ ವಾತ್ಸಲ್ಯ ಮಾರ್ಗಸೂಚಿಯನ್ವಯ 18 ವರ್ಷ ತುಂಬುವವರೆಗೆ ಕುಟುಂಬದ ವಾತಾವರಣವನ್ನು ಉತ್ತಮ ಪಡಿಸುವ ಸಲುವಾಗಿ.
ಮಕ್ಕಳು ದುಡಿಮೆಗೆ ಹೋಗುವುದನ್ನು ತಪ್ಪಿಸಿ ಶಿಕ್ಷಣವನ್ನು ಮುಂದುವರಿಸುವುದನ್ನು ಉತ್ತೇಜಿಸಲು ಹಾಗೂ ವೈದ್ಯಕೀಯ, ಪೌಷ್ಠಿಕ ಆಹಾರ, ವೃತ್ತಿ ತರಬೇತಿ ಮತ್ತು ಇತರೆ ಅವಶ್ಯಕತೆಗಳನ್ನು ಪೂರೈಸಲು ರೂ. 4000 ಸಹಾಯಧನ ನೀಡಲಾಗುತ್ತಿದೆ
* ಯೋಜನೆಗಳ ಬಗ್ಗೆ ಹೆಚ್ಚಿನ ವಿವರ ಪಡೆದುಕೊಳ್ಳಲು ಹಾಗೂ ಯೋಜನೆಗೆ ಅರ್ಜಿ ಸಲ್ಲಿಸಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿಗೆ ಭೇಟಿ ನೀಡಿ
* ಆನ್ಲೈನ್ ಹಾಗೂ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದ್ದು ಸಂಬಂಧಿಸಿದ ಪೂರಕ ದಾಖಲೆಗಳ ಜೊತೆ ಅರ್ಜಿ ಸಲ್ಲಿಸಿ ಅನುದಾನ ಪಡೆಯಿರಿ. ಮತ್ತು ಈ ಉಪಯುಕ್ತ ಮಾಹಿತಿಯನ್ನು ಹೆಚ್ಚಿನ ಜನರೊಡನೆ ಶೇರ್ ಮಾಡಿ.
Credits:-👇👇👇