BEL
ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ಬಹು ಮುಖ್ಯ ಅಪ್ಡೇಟ್ ಇದೆ. ಸರ್ಕಾರಿ ಹುದ್ದೆ ಪಡೆಯುವುದು ಎಂದರೆ ಅಷ್ಟು ಸುಲಭವಲ್ಲ ಅದೊಂದು ತಪಸ್ಸು ಇದ್ದಂತೆ. ಇಂತಹ ದೃಢ ನಿಶ್ಚಯ ಇಟ್ಟುಕೊಂಡು ಸರ್ಕಾರಿ ಹುದ್ದೆ ಪಡೆಯುವ ಗುರಿ ಹೊಂದಿರುವ ಎಲ್ಲಾ ಆಕಾಂಕ್ಷಿಗಳಿಗೆ ನಿಮ್ಮ ಹಂಬಲವನ್ನು ಸಾಕಾರ ಮಾಡಿಕೊಳ್ಳಲು ಮತ್ತೊಂದು ಅವಕಾಶ ಸಿಗುತ್ತಿದೆ.
ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವಂತಹ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ (BEL Recruitment – 2025) ಬೃಹತ್ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಹುದ್ದೆಯ ವಿವರ ಏನು? ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಯಾರು ಅರ್ಹರು? ಇತ್ಯಾದಿ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆಯವರೆಗೂ ಓದಿ.
ನೇಮಕಾತಿ ಸಂಸ್ಥೆ:- ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharat Electronics Limited)
ಹುದ್ದೆ ಹೆಸರು:- ಪ್ರೊಬೇಷನರಿ ಇಂಜಿನಿಯರ್ ಹುದ್ದೆಗಳು
ಹುದ್ದೆಗಳ ವಿವರ:-
* ಪ್ರೊಬೇಷನರಿ ಇಂಜಿನಿಯರ್ (ಇಲೆಕ್ಟ್ರಾನಿಕ್ಸ್) – 200 ಹುದ್ದೆಗಳು
* ಪ್ರೊಬೇಷನರಿ ಇಂಜಿನಿಯರ್ (ಮೆಕ್ಯಾನಿಕಲ್) – 150 ಹುದ್ದೆಗಳು
ಉದ್ಯೋಗ ಸ್ಥಳ:- ಭಾರತದಾದ್ಯಂತ…
ವೇತನ ಶ್ರೇಣಿ:- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗನುಸಾರವಾಗಿ ಮಾಸಿಕ ರೂ. 40,000 ರಿಂದ ರೂ. 1,40,000ರವರೆಗೆ ವೇತನ ಮತ್ತು ಇನ್ನಿತರ ಸೌಲತ್ತುಗಳು ಸಿಗುತ್ತವೆ.
ಶೈಕ್ಷಣಿಕ ವಿದ್ಯಾರ್ಹತೆ:-
* ಪ್ರೊಬೇಷನರಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು BE/ B. tec/ B. Sc/ ಇಂಜಿನಿಯರಿಂಗ್ ಗ್ರಾಜ್ಯುಯೇಟ್ ಇನ್ ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಅಭ್ಯಾಸ ಮಾಡಿದವರು ಅರ್ಹರಾಗಿರುತ್ತಾರೆ
* ಪ್ರೊಬೇಷನರಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು BE/ B. tec/ B. Sc/ ಇಂಜಿನಿಯರಿಂಗ್ ಗ್ರಾಜ್ಯುಯೇಟ್ ಇನ್ ಮೆಕ್ಯಾನಿಕಲ್ ಅಭ್ಯಾಸ ಮಾಡಿರುವವರು ಅರ್ಹರಾಗಿರುತ್ತಾರೆ
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 25 ವರ್ಷಗಳು
ವಯೋಮಿತಿ ಸಡಿಲಿಕೆ:-
* OBC ಅಭ್ಯರ್ಥಿಗಳಿಗೆ 3 ವರ್ಷಗಳು
* SC / ST ಅಭ್ಯರ್ಥಿಗಳಿಗೆ 5 ವರ್ಷಗಳು
* ಅಂಗವಿಕಲ ಅಭ್ಯರ್ಥಿಗಳಿಗೆ – 10 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ:-
- ಆನ್ಲೈನ್ ವಿಧಾನದಲ್ಲಿಯೇ ಅರ್ಜಿ ಸಲ್ಲಿಸಬೇಕು
- BEL ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಮೊದಲು ನೋಟಿಫಿಕೇಶನ್ ಓದಿಕೊಂಡು ಅರ್ಥೈಸಿಕೊಂಡು, ಕೇಳಲಾಗುವ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ
- ನಂತರ ಅರ್ಜಿ ಸಲ್ಲಿಸುವ ಲಿಂಕ್ ಕ್ಲಿಕ್ ಮಾಡಿ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
- ನಿಮ್ಮ ವರ್ಗಕ್ಕೆ ಅನುಗುಣವಾದ ಅರ್ಜಿ ಶುಲ್ಕ ಪಾವತಿಸಿ ರಸೀದಿ ಪ್ರಿಂಟ್ ಪಡೆಯಿರಿ
- ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿ ಪಡೆಯಿರಿ
ಅರ್ಜಿ ಶುಲ್ಕ:-
- ಅರ್ಜಿ ಶುಲ್ಕವನ್ನು ಆನ್ಲೈನಲ್ಲಿ ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಬಹುದು
- SC / ST, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
- ಉಳಿದ ಅಭ್ಯರ್ಥಿಗಳಿಗೆ ರೂ. 1180
ಆಯ್ಕೆ ವಿಧಾನ:–
* ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT)
* ದಾಖಲೆಗಳ ಪರಿಶೀಲನೆ
* ನೇರ ಸಂದರ್ಶನ
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳು:-
* ಬೆಂಗಳೂರು
* ಹುಬ್ಬಳ್ಳಿ
* ಮಂಗಳೂರು
* ಮೈಸೂರು
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 10 ಜನವರಿ 2025
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31 ಜನವರಿ 2025.