KPSC ನೇಮಕಾತಿ, ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ.! ವೇತನ:-83,900

KPSC

ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ (KPSC) ವತಿಯಿಂದ ಒಂದು ಸಿಹಿ ಸುದ್ದಿ ಇದೆ. ಅದೇನೆಂದರೆ, ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 945ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗಾಗಿ ಅರ್ಹ ಆಸಕ್ತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

WhatsApp Group Join Now
Telegram Group Join Now

ಕೃಷಿ ಇಲಾಖೆಯು (Agriculture Department) ರಾಜ್ಯದ ರೈತರ ಪರವಾಗಿ ಕಾರ್ಯ ನಿರ್ವಹಿಸುತ್ತದೆ. ಕೃಷಿ ಕ್ಷೇತ್ರದಲ್ಲಿ ಹೊಸ ಹೊಸ ತಂತ್ರಜ್ಞಾನಗಳ ಬಳಕೆ, ಪ್ರಯೋಗಾತ್ಮಕ ಕಾರ್ಯಗಳನ್ನು ಕೈಕೊಂಡು ರೈತ ಪರ ಯೋಜನೆಗಳ ಪರವಾಗಿ ಶ್ರಮಿಸುತ್ತದೆ.

ಹಾಗಾಗಿ ಇಲಾಖೆಗೆ ಕೃಷಿಯಲ್ಲಿ ಆಸಕ್ತಿ ಇರುವ ಹಾಗೂ ಕೃಷಿ ಬಗ್ಗೆ ಅಧ್ಯಯನ ಮಾಡಿರುವಂತಹ ಮಾನವ ಸಂಪನ್ಮೂಲದ ಅಗತ್ಯತೆ ಇರುವುದರಿಂದ ಕೃಷಿ ವಿಭಾಗದಲ್ಲಿ ಅಭ್ಯಾಸ ಮಾಡಿದವರನ್ನು ಸೂಕ್ತ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳುತ್ತದೆ. ಅಂತೆಯೇ ಈ ಬಾರಿಯೂ ಕೂಡ ಕೃಷಿ ವಿಭಾಗದ ಅಭ್ಯರ್ಥಿಗಳಿಗೆ ಒಂದು ಅದ್ಭುತ ಅವಕಾಶ ಸಿಗುತ್ತದೆ ಈ ನೇಮಕಾತಿ ಕುರಿತ ಹೆಚ್ಚಳ ವಿವರ ಹೀಗಿದೆ ನೋಡಿ.

ನೇಮಕಾತಿ ಸಂಸ್ಥೆ:- ಕರ್ನಾಟಕ ಲೋಕಸೇವಾ ಆಯೋಗ(KPSC)

ಉದ್ಯೋಗ ಸಂಸ್ಥೆ:- ಕೃಷಿ ಇಲಾಖೆ

ಹುದ್ದೆ ಹೆಸರು:-
* ಕೃಷಿ ಅಧಿಕಾರಿ
* ಸಹಾಯಕ ಕೃಷಿ ಅಧಿಕಾರಿ

ಹುದ್ದೆಗಳ ವಿವರ:-
* ಕೃಷಿ ಅಧಿಕಾರಿ – 128 ಹುದ್ದೆಗಳು
* ಸಹಾಯಕ ಕೃಷಿ ಅಧಿಕಾರಿ – 817 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ:- 945 ಹುದ್ದೆಗಳು

ಉದ್ಯೋಗ ಸ್ಥಳ:- ಕರ್ನಾಟಕ

ವೇತನ ಶ್ರೇಣಿ:- ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.40,900 ದಿಂದ ರೂ. 83,900 ರವರೆಗೆ ವೇತನ ಇರುತ್ತದೆ ಇದರೊಂದಿಗೆ ಇನ್ನಿತರ ಸರ್ಕರಿ ಸೌಲಭ್ಯಗಳು ಕೂಡ ಸಿಗುತ್ತವೆ.

ಶೈಕ್ಷಣಿಕ ವಿದ್ಯಾರ್ಹತೆ:-

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಆಹಾರ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ ಬಯೋಟೆಕ್ನಾಲಜಿ ಅಥವಾ ಕೃಷಿ ಇಂಜಿನಿಯರಿಂಗ್‌ನಲ್ಲಿ B.Sc / B.Tech ಪೂರ್ಣಗೊಳಿಸಿರಬೇಕು.

ವಯೋಮಿತಿ:-

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 38 ವರ್ಷಗಳು

ವಯೋಮಿತಿ ಸಡಿಲಿಕೆ:-

* SC/ST/Cat-1 ಅಭ್ಯರ್ಥಿಗಳಿಗೆ 5 ವರ್ಷಗಳು
* 2A/2B/3A/3B ಅಭ್ಯರ್ಥಿಗಳಿಗೆ 3 ವರ್ಷಗಳು
* PWD ಮತ್ತು ವಿಧವಾ ಅಭ್ಯರ್ಥಿಗಳು 10 ವರ್ಷಗಳು

ಅರ್ಜಿ ಸಲ್ಲಿಸುವ ವಿಧಾನ:-

  •  ಆನ್ಲೈನ್ ನಲ್ಲಿಯೇ ಅರ್ಜಿ ಸಲ್ಲಿಸಬೇಕು
  •  KPSC ಅಧಿಕೃತ ವೆಬ್ಸೈಟ್ ಆದ kpsconline. https://karnataka.gov.in ವೆಬ್ ಸೈಟ್ ತೆರಳಿ ನೀಡಿರುವ ಸೂಚನೆಗಳಂತೆ ಅರ್ಜಿ ಸಲ್ಲಿಸಿ
  • ನಿಮ್ಮ ವರ್ಗಕ್ಕೆ ಅನುಸಾರವಾದ ಅರ್ಜಿ ಶುಲ್ಕ ಪಾವತಿಸುವ ಮೂಲಕ ಅರ್ಜಿ ಸಲ್ಲಿಕೆ ಭರ್ತಿ ಮಾಡಿ ಅರ್ಜಿ ಸ್ವೀಕೃತಿ ಪ್ರತಿ ಮತ್ತು ಅರ್ಜಿ ಶುಲ್ಕ ಪಾವತಿ ಮಾಡಿರುವ ರಸೀತಿ ಪ್ರಿಂಟ್ ಪಡೆಯಿರಿ.
ಅರ್ಜಿ ಶುಲ್ಕ:-
  • * SC / ST / Cat-I / PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
  •  ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
  •  2A/2B/3A/3B ಅಭ್ಯರ್ಥಿಗಳಿಗೆ ರೂ.300
  •  ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600
ಆಯ್ಕೆ ವಿಧಾನ:-

* ಸ್ಪರ್ಧಾತ್ಮಕ ಪರೀಕ್ಷೆ
* ನೇರ ಸಂದರ್ಶನ
* ದಾಖಲೆಗಳ ಪರಿಶೀಲನೆ

ಪ್ರಮುಖ ದಿನಾಂಕಗಳು:-

* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 03.01.2025
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 01.02.2025

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ

Leave a Comment