SBI Recruitment
ಭಾರತದ ಪ್ರತಿಷ್ಠಿತ ಬ್ಯಾಂಕ್ ಗಳಲ್ಲಿ ಒಂದಾದ ಸರ್ಕಾರಿ ಸೌಮ್ಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India). ಭಾರತದಾದ್ಯಂತ ಅತಿ ಹೆಚ್ಚಿನ ಸಂಖ್ಯೆಗಳಲ್ಲಿ ಬ್ರಾಂಚ್ ಗಳನ್ನು ಹೊಂದಿರುವ SBI ಬ್ಯಾಂಕ್ ನಲ್ಲಿ ಪ್ರತಿವರ್ಷವು ಸಾವಿರಾರು ಹುದ್ದೆಗಳಿಗೆ ನೇಮಕಾತಿ ನಡೆಯುತ್ತದೆ. ಅಂತೆಯೇ ಈ ವರ್ಷ ಕೂಡ ನೇಮಕಾತಿ ನಡೆದಿತ್ತು.
ಈಗ ಮತ್ತೊಮ್ಮೆ ವರ್ಷಾಂತದಲ್ಲಿ ಹೆಚ್ಚುವರಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ ಮಾಡಲಾಗಿದೆ. ಯಾವ ಬಗೆಯ ಹುದ್ದೆಗಳು? ಈ ಹುದ್ದೆಗಳಿಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಇತ್ಯಾದಿ ಮಾಹಿತಿ ತಿಳಿದುಕೊಳ್ಳಲು ಅಂಕಣವನ್ನು ಕೊನೆಯವರೆಗೂ ಓದಿ ಮತ್ತು ತಪ್ಪದೇ ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ನೇಮಕಾತಿ ಸಂಸ್ಥೆ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
ಉದ್ಯೋಗ ಸಂಸ್ಥೆ:-ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
ಹುದ್ದೆ ಹೆಸರು:- ಪ್ರೋಬೇಷನರಿ ಆಫೀಸರ್ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:- 600 ಹುದ್ದೆಗಳು
ಉದ್ಯೋಗ ಸ್ಥಳ:- ಭಾರತದಾದ್ಯಂತ ವಿವಿಧ ಶಾಖೆಗಳಲ್ಲಿ
ವೇತನ ಶ್ರೇಣಿ:- ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ ಉತ್ತಮ ಮೊತ್ತದ ವೇತನ ಸಿಗುವುದಲ್ಲದೆ ಇನ್ನಿತರೆ ಸವಲತ್ತುಗಳು ಕೂಡ ಸಿಗುತ್ತವೆ.
ಶೈಕ್ಷಣಿಕ ವಿದ್ಯಾರ್ಹತೆ:-
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭಾರತದಲ್ಲಿ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಯಾವುದಾದರೂ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಪಡೆದಿರಬೇಕು.
* ಕೊನೆಯ ವರ್ಷದ ಅಥವಾ ಅಂತಿಮ ಸೆಮಿಸ್ಟರ್ ನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.
ವಯೋಮಿತಿ:-
- * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 21 ವರ್ಷಗಳು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 30 ವರ್ಷಗಳು
ವಯೋಮಿತಿ ಸಡಿಲಿಕೆ:-
- * SC/ST ಅಭ್ಯರ್ಥಿಗಳಿಗೆ 5 ವರ್ಷಗಳು
* OBC ಅಭ್ಯರ್ಥಿಗಳಿಗೆ 3 ವರ್ಷಗಳು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ:-
- * ಆನ್ಲೈನ್ ನಲ್ಲಿಯೇ ಅರ್ಜಿ ಸಲ್ಲಿಸಬೇಕು
* ನೇರವಾಗಿ SBI ನ ಅಧಿಕೃತ ವೆಬ್ಸೈಟ್ಗೆ ತೆರಳಿ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಓದಿ ಅರ್ಥೈಸಿಕೊಂಡು ಅರ್ಜಿ ಸಲ್ಲಿಸಲು ಮುಂದುವರೆಯಿರಿ
ವೆಬ್ಸೈಟ್ ವಿಳಾಸ – https://bank.sbi/careees
* ಅರ್ಜಿ ಸಲ್ಲಿಕೆ ಯಶಸ್ವಿ ಆದ ನಂತರ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿ ಹಾಗೂ ಅರ್ಜಿ ಶುಲ್ಕ ಪಾವತಿ ಮಾಡಿರುವುದಕ್ಕೆ ರಸೀದಿ ಪ್ರಿಂಟ್ ಪಡೆಯಿರಿ
ಅರ್ಜಿ ಶುಲ್ಕ:-
- * SC/ST ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
* ಉಳಿದ ಅಭ್ಯರ್ಥಿಗಳಿಗೆ ರೂ. 750
ಆಯ್ಕೆ ವಿಧಾನ:-
- * ಬ್ಯಾಂಕ್ ನಿಯಮಾವಳಿಗಳ ಅನುಸಾರ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ
* ಲಿಖಿತ ರೂಪದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ
* ಆಯ್ಕೆ ಆದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆ ನಡೆಸುವ ಮೂಲಕ ಅರ್ಹರನ್ನು ಆಯ್ದುಕೊಳ್ಳಲಾಗುತ್ತದೆ
ಪ್ರಮುಖ ದಿನಾಂಕಗಳು:-
- * ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 27 ಡಿಸೆಂಬರ್, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 16 ಜನವರಿ 2025
* ಪರೀಕ್ಷೆ ನಡೆಯುವ ದಿನಾಂಕ – 8-15 ಮಾರ್ಚ್ 2025.